ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸೋಮುವಾರದಂದು ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಿಗ್ಗೆ ಯಡಿಯೂರಪ್ಪ ಅವರಿಗೆ ಕೆಲ ಷರತ್ತುಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿದ್ದು ಯಾವುದೇ ತೊಂದರೆ ಬಾರದಂತೆ ನಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರ ಬಳಿ ತೆರಳಿದ ಯಡಿಯೂರಪ್ಪ ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತ ಕೋರಿದ್ದರು. ಅದರಂತೆ ಇಂದು ಸಂಜೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂದು ತಾವೊಬ್ಬರೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿದ ನಂತರ ಸಚಿವ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಆದರೆ, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಯಾವೊಬ್ಬ ನಾಯಕರು ಹಾಜರಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.