ಹಸಿರು ಶಾಲು ಹೊದ್ದು ಸಿಎಂ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್‌ವೈ

Webdunia
ಶುಕ್ರವಾರ, 26 ಜುಲೈ 2019 (18:21 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸೋಮುವಾರದಂದು ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಿಗ್ಗೆ ಯಡಿಯೂರಪ್ಪ ಅವರಿಗೆ ಕೆಲ ಷರತ್ತುಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿದ್ದು ಯಾವುದೇ ತೊಂದರೆ ಬಾರದಂತೆ ನಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
 
ರಾಜ್ಯಪಾಲರ ಬಳಿ ತೆರಳಿದ ಯಡಿಯೂರಪ್ಪ ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತ ಕೋರಿದ್ದರು. ಅದರಂತೆ ಇಂದು ಸಂಜೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಇಂದು ತಾವೊಬ್ಬರೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿದ ನಂತರ ಸಚಿವ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
 
ಆದರೆ, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಯಾವೊಬ್ಬ ನಾಯಕರು ಹಾಜರಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments