Publish Date: Mon, 10 Dec 2018 (10:06 IST)
Updated Date: Mon, 10 Dec 2018 (10:08 IST)
ಬೆಳಗಾವಿ : ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಸಿಎಂ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು,’ ಸಿಎಂ ಸ್ಟಾರ್ ಹೋಟೆಲ್ ನಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ಯಾರ ಕೈಗೂ ಸಿಗದೆ ದೂರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೇ ‘ಸಾಲಮನ್ನಾ ಎಂದು ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಉ.ಕರ್ನಾಟಕ ಅಭಿವೃದ್ಧಿ ಕಾಣದೆ ತತ್ತರಿಸಿದೆ. ಇದೆಲ್ಲದರ ಕುರಿತು ಸದನದಲ್ಲಿ ಚರ್ಚಿಸುತ್ತೇವೆ. ಇಂದು ಬೆಳಿಗ್ಗೆ 10 ಕ್ಕೆ ಪಕ್ಷದ ಪ್ರಮುಖರ ಸಭೆ ನಡೆಸಿ ಉ.ಕರ್ನಾಟಕ ಅಭಿವೃದ್ಧಿ ಕುರಿತು ಹೋರಾಟದ ಬಗ್ಗೆ ಚರ್ಚೆ ನಡೆಸುತ್ತೇನೆ. ರಾಜ್ಯದ ರೈತರ ಸಂಕಷ್ಟಕ್ಕೆ ಈ ಹೋರಾಟ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.