Webdunia - Bharat's app for daily news and videos

Install App

ನೋಡ್ತಾ ಇರಿ, ಇನ್ನಷ್ಟು ವಾಲ್ಮೀಕಿ ನಿಗಮದ ಇನ್ನಷ್ಟು ಕರ್ಮಕಾಂಡಗಳು ಬೆಳಕಿಗೆ ಬರುತ್ತೆ: ಬಿ ಶ್ರೀರಾಮುಲು

Krishnaveni K
ಗುರುವಾರ, 11 ಜುಲೈ 2024 (14:32 IST)
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು ಹಾಕಿದಂತೆ ಎಂಬಂತೆ ಈ ಸರಕಾರ ವರ್ತಿಸುತ್ತಿದೆ. ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಬುಡಕಟ್ಟು ಸಮುದಾಯ, ಪರಿಶಿಷ್ಟ ಸಮುದಾಯಕ್ಕೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬಲಪಡಿಸುವ ಉದ್ದೇಶದಿಂದ ರಚಿಸಲಾಗಿತ್ತು ಎಂದು ನೆನಪಿಸಿದರು.
 
ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ತಿಂಗಳಿನಿಂದ ಬಿಜೆಪಿ ಹೋರಾಟ ನಡೆದಿದೆ. ನಾಗೇಂದ್ರ ಅವರ ಮನೆಯ ಮೇಲೆ, ಆಸ್ತಿಗಳ ಮೇಲೆ ಇ.ಡಿ. ದಾಳಿ ಮಾಡಿದೆ. ಅನೇಕ ದಾಖಲಾತಿಗಳ ಪರಿಶೀಲನೆ ನಡೆದಿದೆ ಎಂದು ವಿವರಿಸಿದರು.

ಒಂದೆಡೆ ಎಸ್‍ಐಟಿ ವಿಚಾರಣೆಯೂ ಇದೆ ಎಂದ ಅವರು, ಇ.ಡಿ. 18 ಕಡೆಗಳಲ್ಲಿ ದಾಳಿ ನಡೆಸಿದೆ. ಯೂನಿಯನ್ ಬ್ಯಾಂಕಿನವರು ಸಿಬಿಐಗೆ ದೂರು ಕೊಟ್ಟ ಕಾರಣ ಅದರ ಆಧಾರದಲ್ಲಿ ಇ.ಡಿ. ದಾಳಿ ನಡೆಯುತ್ತಿರಬಹುದು ಎಂದು ಅವರು ತಿಳಿಸಿದರು.

ವಾಲ್ಮೀಕಿ ನಿಗಮದಿಂದ ನಾಗೇಂದ್ರರ ಪಿ.ಎ. ಆಗಿದ್ದ ಹರೀಶ್ ಎಂಬವರ ಖಾತೆಗೆ 80 ಲಕ್ಷ ಹಣ ವರ್ಗಾವಣೆ ಆಗಿದೆ ಎಂದ ಅವರು, ಇಡಿಯನ್ನು ಆಹ್ವಾನಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ದಾಳಿ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಸರಕಾರವು ಈ ದೊಡ್ಡ ಹಗರಣದ ಭಾಗೀದಾರ ಎಂದು ಆರೋಪಿಸಿದರು.
ರಾಜ್ಯದ ಜನರು ನಾಚಿಕೆ ಇಲ್ಲದ ಸರಕಾರ ಎನ್ನುತ್ತಿದ್ದಾರೆ. ಕಳ್ಳರ ಸರಕಾರ ಎಂದು ಮಾತನಾಡುತ್ತಿದ್ದಾರೆ. ದರೋಡೆ ನಡೆದ ನಂತರ ಕಳ್ಳರನ್ನು ಹಿಡಿಯಬೇಕಿದೆ. ಇ.ಡಿಯವರು ಬಂದು ಕಳ್ಳರ ಉಪಾಧ್ಯಕ್ಷನನ್ನು ಹಿಡಿದಿದ್ದಾರೆ. ಅಧ್ಯಕ್ಷರು ಯಾರು ಎಂದು ಗೊತ್ತಾಗಿಲ್ಲ ಎಂದು ವಿಶ್ಲೇಷಿಸಿದರು. ಅಧ್ಯಕ್ಷರ ಪತ್ತೆಗೆ ಇ.ಡಿ. ಮುಂದಾಗಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ಮುಂದಿನ ಸುದ್ದಿ
Show comments