Publish Date: Thu, 23 Jul 2020 (18:50 IST)
Updated Date: Thu, 23 Jul 2020 (18:52 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಚಿವ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.
ಕೊರೊನಾ ಉಪಕರಣ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗಿಲ್ಲ. ಆರೋಗ್ಯ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ಆಗಿಲ್ಲ ಎಂದಿದ್ದಾರೆ.
ನಾವು ಖರ್ಚು ಮಾಡಿರೋದು 290 ಕೋಟಿ ರೂಪಾಯಿ. ಆದರೆ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ 750 ಕೋಟಿ ರೂ. ಖರ್ಚು ಮಾಡಿದೆ ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ.
ಖರೀದಿ ವೇಳೆ ಬೆಲೆ ಹೆಚ್ಚು ಕಡಿಮೆ ಆಗಿರಬಹುದು. ಆದರೆ ಅವ್ಯವಹಾರ ಆಗಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.