Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರದ ರೀತಿ ಜನರ ಕಷ್ಟಕ್ಕೆ ಸ್ಪಂದಿಸಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಸಲಹೆಯಿತ್ತ ಬಿ ವೈ. ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಸೋಮವಾರ, 22 ಜುಲೈ 2024 (11:48 IST)
ಬೆಂಗಳೂರು: ನೆರೆಪೀಡಿತರು ಮತ್ತು ಮನೆ ಕಳಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚು ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಂಕೋಲಾ ತಾಲ್ಲೂಕಿನ ಉಳುವಾರೆ, ಶಿರೂರು ಮತ್ತಿತರ ಕಡೆ ಆದ ಮಳೆ ಹಾನಿ, ಅನಾಹುತದಿಂದ ಬಡವರು ಮನೆ ಕಳೆದುಕೊಂಡಿದ್ದಾರೆ. ಅದನ್ನು ನಾನು ವೀಕ್ಷಿಸಿ ಬಂದಿದ್ದೇನೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ಎನ್‍ಡಿಆರ್‍ಎಫ್ ನಿಯಮದ ಪ್ರಕಾರ ಮನೆ ಕಳೆದುಕೊಂಡ ಬಡವರಿಗೆ ಸುಮಾರು 1 ಲಕ್ಷ ಕೊಡಬೇಕಿತ್ತು. ಅದು ಸಾಕಾಗುವುದಿಲ್ಲ ಎಂದು 5 ಲಕ್ಷ ನೀಡುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು ಎಂದರು.

ಗೋಡೆ ಕುಸಿದ ಮನೆಗೆ ಎನ್‍ಡಿಆರ್‍ಎಫ್ ನಿಯಮದ ಪ್ರಕಾರ 40 ಸಾವಿರ ಕೊಡುತ್ತಿದ್ದರು. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ನಿರ್ಧಾರವನ್ನು ಯಡಿಯೂರಪ್ಪ ಅವರು ಕೈಗೊಂಡಿದ್ದರು. ರಾಜ್ಯಾದ್ಯಂತ ಬಡವರು ಅತಿವೃಷ್ಟಿಯಿಂದ ಮನೆಗಳನ್ನು ಕಳಕೊಳ್ಳುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಇದೇ ಮಾದರಿಯಲ್ಲಿ ಪರಿಹಾರ ಕೊಡಬೇಕು; ತಕ್ಷಣ ಈ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಶಿರೂರು ಗುಡ್ಡ ಕುಸಿತದಲ್ಲಿ ಲಕ್ಷ್ಮಣ ನಾಯ್ಕರ ಹಲವರು ಮೃತರಾಗಿದ್ದು, ಕುಟುಂಬದ ಮೂವರು ಮಹಿಳೆಯರು ನಿರ್ಗತಿಕರಾಗಿದ್ದಾರೆ. ಆದರೆ, ಅವರ ಮನೆಗೆ ಶಾಸಕರು, ಸಚಿವರು ಭೇಟಿ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಕಾನೂನು ಏನೇ ಇದ್ದರೂ ಪರಿಹಾರ ನೀಡಬೇಕಿತ್ತು ಎಂದ ಅವರು, ನಿನ್ನೆ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಬಡವರ ಈ ಕುಟುಂಬಕ್ಕೆ ರಾಜ್ಯ ಸರಕಾರ ಕೂಡಲೇ ಸ್ಪಂದಿಸಬೇಕು; ಪರಿಹಾರ ಕೊಡಬೇಕಿದೆ ಎಂದು ಒತ್ತಾಯಿಸಿದರು.
 
ನಿರೀಕ್ಷೆ- ಸವಾಲು ಇರುವ ಕೇಂದ್ರ ಬಜೆಟ್ ನಾಳೆ

ಸನ್ಮಾನ್ಯ ನರೇಂದ್ರ ಮೋದಿಜೀ ಅವರ ನಾಯಕತ್ವದಲ್ಲಿ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನಾಳೆ 7ನೇ ಬಜೆಟ್ ಅನ್ನು ಮಂಡಿಸುತ್ತಾರೆ. ಸಾಕಷ್ಟು ನಿರೀಕ್ಷೆ ಜೊತೆಗೇ ಸವಾಲು ಅವರ ಮುಂದಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಭಾರತವನ್ನು ಜಗತ್ತಿನ ಅಗ್ರಗಣ್ಯ ರಾಷ್ಟ್ರಗಳ ಸಾಲಿಗೆ ಒಯ್ಯಲು ಪೂರಕ ಉತ್ತಮ ಬಜೆಟ್ ಮಂಡಿಸಲಿದ್ದಾರೆ ಎಂದು ನುಡಿದರು.

ಯುವಕರು, ರೈತರು, ಮಧ್ಯಮ ವರ್ಗಕ್ಕೆ ನೆರವಾಗುವ ಹಾಗೂ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಅವರು ಮಂಡಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ ಎಂದರು.
 

 

Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ಕಂಪನಿಗಳಲ್ಲಿ 14 ಗಂಟೆ ದುಡಿತ: ಈ ಥರಾ ಕತ್ತೆ ದುಡಿತ ನ್ಯಾಯಾನಾ ಅಂತಿದ್ದಾರೆ ನೌಕರರು