ಸಿಎಂ ಕುರ್ಚಿಯಿಂದ ಎದ್ದೇಳಿ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

Krishnaveni K
ಶನಿವಾರ, 17 ಆಗಸ್ಟ್ 2024 (12:40 IST)
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೇ ರಾಜ್ಯ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.” ಎಂದು ಗಮನ ಸೆಳೆದಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು. ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments