ಲಿಂಗಾಯತ, ವೀರಶೈವದಂತೆ ಮತ್ತೆ ಸಿದ್ದರಾಮಯ್ಯ ಧರ್ಮ ಒಡೆಯಲು ಹೊರಟಿದ್ದಾರೆ: ವಿಜಯೇಂದ್ರ

Krishnaveni K
ಮಂಗಳವಾರ, 16 ಸೆಪ್ಟಂಬರ್ 2025 (15:33 IST)
ಬೆಂಗಳೂರು: ಸಂವಿಧಾನದಲ್ಲಿ- ಕಾನೂನಿನಲ್ಲಿ ಅವಕಾಶ ಇಲ್ಲದೇ ಇದ್ದರೂ ರಾಜ್ಯ ಸರಕಾರ ಜಾತಿ ಜನಗಣತಿ ನಡೆಸುತ್ತಿದೆ. ಸರ್ವೇ ನೆಪದಲ್ಲಿ ಜಾತಿ ಗಣತಿ ಮಾಡಲು ಸಿದ್ದರಾಮಯ್ಯ ಅವರ ಸರಕಾರ ಹೊರಟಿದೆ. ಈ ನಿರ್ಧಾರದ ಹಿಂದೆ ಕುತಂತ್ರ- ಷಡ್ಯಂತ್ರವೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಗೋಲ್ಡ್ ಫಿಂಚ್ ಹೋಟೆಲ್‍ನಲ್ಲಿ ಇಂದು ಪ್ರಮುಖರ ಸಭೆ ನಡೆಯಿತು. ಮಾಧ್ಯಮಗಳ ಜೊತೆ ಬಳಿಕ ಮಾತನಾಡಿದ ಅವರು, ಕಾಲಂಗಳನ್ನು ಗಮನಿಸಿದರೆ ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಜೈನ, ಸಿಕ್ಖ್, ಬೌದ್ಧ, ಪಾರ್ಸಿ, ನಾಸ್ತಿಕರು, ಇತರೇ ಎಂಬ ವರ್ಗಗಳನ್ನು ಮಾಡಿದ್ದಾರೆ. ಇತರೇ ಎಂಬುದು ಕೂಡ ಕಾನೂನುಬಾಹಿರ ಎಂದು ಟೀಕಿಸಿದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನಸ್ಥಿತಿಯನ್ನು ಜಾತಿ ಜನಗಣತಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿದ್ದಾರೆ. ವೀರಶೈವ ಸಮಾಜವನ್ನು ಒಡೆಯುವ ಕುತಂತ್ರ, ಷಡ್ಯಂತ್ರ ಈ ಜಾತಿ ಜನಗಣತಿ ಹಿಂದೆ ಇದೆ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದರು. ಆಗಲೂ ಕೈ ಸುಟ್ಟುಕೊಂಡಿದ್ದರು ಎಂದು ಟೀಕಿಸಿದರು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸರ್ವೇ ಮಾಡುವುದಾಗಿ ಹೇಳಿ, ಮತ್ತೊಮ್ಮೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದರು.

ಸಮಾಜದ ಗೊಂದಲ ಸರಿಪಡಿಸಬೇಕು; ಸಮಾಜವನ್ನು ಒಗ್ಗೂಡಿಸಬೇಕು, ಸಮಾಜವನ್ನು ಸಮರ್ಪಕ ದಿಕ್ಕಿನಲ್ಲಿ ಒಯ್ಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ತೀರ್ಮಾನ ಮಾಡಲಾಗಿದೆ. ಕೆಲವು ಹಿರಿಯರು ವೀರಶೈವ ಮಹಾಸಭಾದ ಪ್ರಮುಖರ ಜೊತೆ ಚರ್ಚೆ ಮಾಡಬೇಕು; ಪಂಚ ಪೀಠಾಧೀಶ್ವರರು, ವಿರಕ್ತ ಮಠದ ಸ್ವಾಮೀಜಿಗಳ ಜೊತೆ ಚರ್ಚಿಸಿ, ಒಳಪಂಗಡ ಮರೆತು ಒಟ್ಟಾಗಿ, ಒಂದಾಗಿ ಸಮಾಜದ ಹಿತದೃಷ್ಟಿಯಿಂದ, ರಾಜ್ಯದ ಹಿತದೃಷ್ಟಿಯಿಂದ ಮುಂದೆ ಸಾಗಲು ನಿರ್ಧರಿಸಲಾಗಿದೆ ಎಂದು ವಿವರ ನೀಡಿದರು.

ಇಂದಿನ ಸಭೆಯ ಒಕ್ಕೊರಲಿನ ತೀರ್ಮಾನದ ಕುರಿತು ಮಠಾಧೀಶರ- ಗಣ್ಯರ ಜೊತೆ ಚರ್ಚಿಸುತ್ತೇವೆ. ಸಮಾಜದ ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗಲು ತೀರ್ಮಾನ ಮಾಡಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments