Publish Date: Tue, 13 Aug 2024 (12:24 IST)
Updated Date: Tue, 13 Aug 2024 (12:37 IST)
ಬೆಂಗಳೂರು: ಸ್ವಾತಂತ್ರö್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟಿಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವತಂತ್ರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು; ಯುವ ಪೀಳಿಗೆಗೆ ಸ್ವತಂತ್ರ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.
ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44ರ ಅಧ್ಯಕ್ಷ ಸಾಗರ್, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಯುವಕರಿಂದ ಬೈಕ್ ರ‍್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ಇದೇ 11ರಿಂದ 15ರವರೆಗೆ ಸ್ವಾತಂತ್ರö್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ (ಆ.14) ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.