Publish Date: Wed, 29 Aug 2018 (19:55 IST)
Updated Date: Wed, 29 Aug 2018 (19:59 IST)
ಕಾಂಗ್ರೆಸ್ ಗೆ ಕೈ ಕೊಟ್ಟಿರುವ ಮಾಜಿ ಸಚಿವ ಬಾಬುರಾವ ಚಿಂಚನಸೂರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷದ ಧ್ವಜ ನೀಡಿ ಚಿಂಚನಸೂರ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನ ಬಾಬುರಾವ ಚಿಂಚನಸೂರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಮುಖರ ಸಮ್ಮುಖದಲ್ಲಿ ಕಮಲ ಪಾಳೆಯಕ್ಕೆ ಸೇರ್ಪಡೆಗೊಂಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷದ ನಾಯಕರು ಹಾಗೂ ಸ್ಥಳೀಯ ಮುಖಂಡರಿಂದಲೇ ನನಗೆ ಹಾನಿಯಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೋಲು ಖಚಿತ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.