Publish Date: Fri, 25 Oct 2024 (15:34 IST)
Updated Date: Fri, 25 Oct 2024 (15:36 IST)
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮತ್ತೋರ್ವ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ, ಇದೀಗ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಂದು ನಡೆದ ಅವಶೇಷ ತೆರವು ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಏಳುಮಲೈ ಎಂದು ಗುರ್ತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತರಾದ ಘಟನೆ ನಡೆದಿದೆ. ಘಟನೆ ಬೆನ್ನಲ್ಲೇ ಅಗ್ನಿಶಾಮಕ ಮತ್ತು ತುರ್ತು ವಿಭಾಗ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯಸರ್ಕಾರದಿಂದ ಪರಿಹಾರವನ್ನು ಘೋಷಣೆ ಮಾಡಲಾಗಿದೆ.