Select Your Language

Notifications

webdunia
webdunia
webdunia
webdunia

ಬಾಬುಸಾಬ್ ಪಾಳ್ಯ ಕಟ್ಟಡ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Chief Minister Siddaramaiah

Sampriya

ಬೆಂಗಳೂರು , ಗುರುವಾರ, 24 ಅಕ್ಟೋಬರ್ 2024 (15:53 IST)
Photo Courtesy X
ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸ್ಥಳಕ್ಕೆ ಭೇಟಿ ನೀಡಿ  8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದರು.

ಬುಧವಾರ ನಾನು ವಯನಾಡ್‌ಗೆ  ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದರು.

ಮೃತದೇಹ ರವಾನಿಸುವ ಕೆಲಸ ಆಗುತ್ತದೆ. ಅನಧಿಕೃತವಾಗಿ ಕಟ್ಟಿದ ಕಟ್ಟಡಗಳಿಗೆ ನೊಟೀಸ್ ಕೊಟ್ಟಿದ್ದಾರೆ. ಆದರೂ ಕಟ್ಟಿದ್ದಾರೆ. ವಲಯದ ಐಎಎಸ್ ಅಫೀಸ್ ಮತ್ತು ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ನೋಟೀಸ್ ಕೊಡಲು ಹೇಳಲಾಗಿದೆ. ಕಾನೂನು ಪ್ರಕಾರ ಮನೆ ಕಟ್ಟಬೇಕು ಎಂದು ಜನರಿಗೆ ಮನವಿ ಮಾಡುತ್ತೇನೆ. ಕಳಪೆ ಕಾಮಗಾರಿಯಿಂದ ಈ ಕಟ್ಟಡ ಬಿದ್ದಿದೆ. ಅನಧಿಕೃತವಾಗಿ ಮನೆ ಕಟ್ಟಲು ಬಿಡಬಾರದು. ಇದಕ್ಕೆಲ್ಲಾ ಅಧಿಕಾರಿಗಳು ಹೊಣೆ ಹಾಗಾಗಿ ಕಮಿಷನರ್‌ಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಮಂಗಳವಾರ ಸಂಜೆಯಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೆ 8ಕಾರ್ಮಿಕರ ಮೃತದೇಹಗಳನ್ನ ಹೊರಗೆ ತೆಗೆಯಲಾಗಿದೆ. ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎನ್​ಡಿಆರ್​​ಎಫ್, ಎಸ್​ಡಿಆರ್​​ಎಫ್ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 14 ಜನರನ್ನು ರಕ್ಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಎಲ್ಲಿದ್ದೀಯಪ್ಪಾ… ಅಂದಿದ್ದ ಕುಮಾರಸ್ವಾಮಿಯಿಂದ ಇಂದು ಮತ್ತೊಂದು ಡೈಲಾಗ್