Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಮತ್ತೆ ವರುಣಾಗಮನ

Back to the state
bangalore , ಶುಕ್ರವಾರ, 8 ಏಪ್ರಿಲ್ 2022 (20:07 IST)
ರಾಜ್ಯಾದ್ಯಂತ ಏಪ್ರಿಲ್​ 10ರವರೆಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕಳೆದ 15 ದಿನದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಭಾನುವಾರದವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 11ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕಲಿ ದಾಖಲೆ ಸೃಷ್ಟಿ, ಅಕ್ರಮಗಳಲ್ಲಿ ಭಾಗಿಯಾದರೆ ತಕ್ಕ ಶಾಸ್ತಿ