Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿನ ಹಿನ್ನಲೆ; ಬೆಂಗಳೂರಿನಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ಸ್ಥಗಿತ

ಕೊರೊನಾ ಸೋಂಕಿನ ಹಿನ್ನಲೆ; ಬೆಂಗಳೂರಿನಲ್ಲಿ ಡ್ರಿಂಕ್  ಆ್ಯಂಡ್ ಡ್ರೈವ್ ತಪಾಸಣೆ ಸ್ಥಗಿತ
ಬೆಂಗಳೂರು , ಭಾನುವಾರ, 9 ಫೆಬ್ರವರಿ 2020 (11:04 IST)
ಬೆಂಗಳೂರು : ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಡ್ರಿಂಕ್  ಆ್ಯಂಡ್ ಡ್ರೈವ್ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ.


ಎಲ್ಲಾ ಕಡೆ ಮಾರಣಾಂತಿಕ ಕೊರೊನಾ ಸೋಂಕು ಹರಡುತ್ತಿದ್ದು, ಡ್ರಿಂಕ್  ಆ್ಯಂಡ್ ಡ್ರೈವ್ ತಪಾಸಣೆಯ ವೇಳೆ ಕೊರೊನಾ ಸೋಂಕು ಹರಡುವ ಭೀತಿ ಎದುರಾದ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ.


ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವರದಿ ಕೇಳಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ರಾಜೀವ್ ಗಾಂಧಿ ಆರೋಗ್ಯ ವಿವಿಗೆ  ಪತ್ರ ಬರೆದಿದ್ದಾರೆ. ವರದಿ ಬಂದ ಬಳಿಕ ಸೂಕ್ತ ಕ್ರಮಗಳೊಂದಿಗೆ ತಪಾಸಣೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಐಫೋನ್ ಬಳಕೆದಾರರಿಗೆ ವ್ಯಾಟ್ಸಪ್ ನಿಂದ ಹೊಸ ಫೀಚರ್