Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ತುರ್ತು ಸಭೆ ನಡೆಸಿದ ಆರೋಗ್ಯ ಸಚಿವರು

ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ತುರ್ತು ಸಭೆ ನಡೆಸಿದ ಆರೋಗ್ಯ ಸಚಿವರು
ಬೆಂಗಳೂರು , ಮಂಗಳವಾರ, 3 ಮಾರ್ಚ್ 2020 (10:44 IST)
ಬೆಂಗಳೂರು : ಬೆಂಗಳೂರಿನಲ್ಲಿದ್ದ ಆಂಧ್ರ ಮೂಲದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಇಂದು ಆರೋಗ್ಯ ಸಚಿವ ಶ್ರೀರಾಮುಲು ತುರ್ತು ಸಭೆ ನಡೆಸಿದ್ದಾರೆ.


ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿರುವ ಆಂಧ್ರ ಮೂಲದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಮುನ್ನೇಚ್ಚರಿಕೆ ಕ್ರಮವಾಗಿ ಇಂದು ಬೆಳಿಗ್ಗೆ ಸಚಿವ ಶ್ರೀರಾಮುಲು ತಮ್ಮ ಅಧಿಕೃತ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.


ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ, ಆಯುಕ್ತರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟೆಕ್ಕಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್