Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆ; ಮಂಡ್ಯದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನಲೆ; ಮಂಡ್ಯದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ
ಮಂಡ್ಯ , ಶನಿವಾರ, 18 ಮೇ 2019 (14:23 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಫಲಿತಾಂಶದ ದಿನಮಂಡ್ಯ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.




ಈ ಬಾರಿಯ ಲೋಕಸಭಾ  ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಚುನಾವಣೆ ಬಾರೀ ಕುತೂಹಲ ಮೂಡಿಸಿದ್ದು, ಫಲಿತಾಂಶದ ದಿನ ಗಲಾಟೆಗಳು ನಡೆದು ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಭದ್ರತೆ ಒದಗಿಸುವಂತೆ ಕೋರಿ ಜಿಲ್ಲಾಧಿಕಾರಿ ಚುನಾವಣಾ ಆಯೋಗಕ್ಕೆ ಪತ್ರ ಸಲ್ಲಿಸಿದ್ದರು.


ಈ ಬಗ್ಗೆ ಹೆಚ್ಚು ಗಮನಹರಿಸಿದ  ಚುನಾವಣಾ ಆಯೋಗವು ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ 2 ದಿನ ಮೇ.23, 24 ರಂದು ನಿಷೇಧಾಜ್ಞೆ ಹೊರಡಿಸಿದೆ. ಆದ್ದರಿಂದ  ಫಲಿತಾಂಶದ ದಿನ ಸಭೆ ಸೇರುವುದು, ವಿಜಯೋತ್ಸವ ಆಚರಣೆ ಮಾಡುವುದು, ಪಟಾಕಿ ಸಿಡಿಸಿಸುವುದು, ಗುಂಪು ಸೇರುವುದು ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸಿಆರ್ ಪಿಎಫ್ ಯೋಧರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ಆಯೋಜಿಸುವಂತೆ ಆಯೋಗ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಭವಿಷ್ಯ ನುಡಿದ ಸಿಎಂ ಕುಮಾರಸ್ವಾಮಿ