Publish Date: Sun, 08 Nov 2026 (22:44 IST)
Updated Date: Sun, 08 Nov 2026 (22:53 IST)
ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ದರ್ಶನೋತ್ಸವದ ವೇಳೆ ವಿಐಪಿ ದರ್ಶನ ವ್ಯವಸ್ಥೆಯಿಂದ ಬೇಸತ್ತ ಭಕ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೊಂದು ನಡೆದಿದೆ. ದೇವಾಲಯದ ಆವರಣದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ದರ್ಶನ ಪಡೆಯುತ್ತಿರುವ ದೃಶ್ಯ ಪ್ರಸಾರವಾಗುತ್ತಿದ್ದ ಎಲ್‌ಇಡಿ (LED) ಪರದೆಗೆ ಭಕ್ತರು ಚಪ್ಪಲಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದೆ.
ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆಯ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಅವರ ಕುಟುಂಬದವರು ದೇವಾಲಯಕ್ಕೆ ಭೇಟಿ ನೀಡಿದ್ದರಿಂದ ಸಾಮಾನ್ಯ ಭಕ್ತರ ದರ್ಶನ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ತಡೆಯಲಾಗಿತ್ತು.
ಸಿಎಂ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸುತ್ತಿದ್ದ ನೇರ ದೃಶ್ಯಗಳನ್ನು ದೇವಾಲಯದ ಹೊರಾಂಗಣದಲ್ಲಿದ್ದ ಎಲ್‌ಇಡಿ ಪರದೆಗಳಲ್ಲಿ ಬಿತ್ತರಿಸಲಾಗುತ್ತಿತ್ತು. ಸುದೀರ್ಘ ಸಮಯ ಸರತಿ ಸಾಲಿನಲ್ಲಿ ಕಾಯ್ದು ಆಯಾಸಗೊಂಡಿದ್ದ ಭಕ್ತರು ವಿಐಪಿ ಸಂಸ್ಕೃತಿಯಿಂದ ಅಸಮಾಧಾನಗೊಂಡು, ಪರದೆಯತ್ತ ತಮ್ಮ ಚಪ್ಪಲಿಗಳನ್ನು ತೂರಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ಅನಿರೀಕ್ಷಿತ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸಾಮಾನ್ಯ ಭಕ್ತರಿಗೆ ತೊಂದರೆ ನೀಡುವ ವಿಐಪಿ ದರ್ಶನ ವ್ಯವಸ್ಥೆಯ ನಿರ್ವಹಣೆ ಹಾಗೂ ಜಿಲ್ಲಾಡಳಿತದ ನಡೆಗೆ ಸಾರ್ವಜನಿಕ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ