Select Your Language

Notifications

webdunia
webdunia
webdunia
webdunia

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

backword class
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಷಯ ಪಾತ್ರೆ ಯೋಜನೆಯ ಜೊತೆ ಕೈ ಜೋಡಿಸಿದ ಹೆಚ್ಎಎಲ್