ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

Webdunia
ಸೋಮವಾರ, 4 ಅಕ್ಟೋಬರ್ 2021 (21:14 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಅಕ್ಟೋಬರ್ 6ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
 
 
ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವದಿಂದ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ಅಕ್ಟೋಬರ್ 5 ಮತ್ತು 6ರಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 
 
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಅಕ್ಟೋಬರ್ 6ರವರೆಗೂ ರಾಜ್ಯದಲ್ಲಿ ಅಧಿಕ ಮಳೆ ಸೂಚನೆ
ಅಕ್ಟೋಬರ್ 6ರ ನಂತರ ಮುಂಗಾರು ಅಂತ್ಯವಾಗಲಿದೆ. 
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದಾಗಿ ಅಕ್ಟೋಬರ್ 4ರಿಂದ ಆರಂಭಗೊಂಡು ಅಕ್ಟೋಬರ್ 5, 6ರಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 
 
ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸೋಮವಾರ ಸಾಧಾರಣ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments