Select Your Language

Notifications

webdunia
webdunia
webdunia
webdunia

ಬಗರ್ ಹುಕುಂ ವಿಳಂಬ: ಅಧಿಕಾರಿಗಳ ವಿರುದ್ಧ ಸಚಿವ ಕಾಗೋಡು ಗರಂ

ಬಗರ್ ಹುಕುಂ ವಿಳಂಬ: ಅಧಿಕಾರಿಗಳ ವಿರುದ್ಧ ಸಚಿವ ಕಾಗೋಡು ಗರಂ
ಶಿವಮೊಗ್ಗ , ಸೋಮವಾರ, 8 ಆಗಸ್ಟ್ 2016 (16:14 IST)
ಬಗರ್ ಹುಕುಂ ಹಕ್ಕು ಪತ್ರ ವಿತರಣೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಿ ಇಲ್ಲದಿದ್ದರೆ ಮನೆಗೆ ಹೋಗಿ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಶಿವಮೊಗ್ಗ ಜಿಲ್ಲೆಯಲ್ಲಿ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಬಗರ್ ಹುಕುಂ ಹಕ್ಕು ಪತ್ರಗಳನ್ನು ಫಲಾನುಭವಿಗಳಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಸಾಗರದ ಸಹಾಯಕ ಆಯಕ್ತರು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಹಾಗೂ ತಹಶೀಲ್ದಾರ್ ವಿರುದ್ಧ ಗರಂ ಆದರು.
 
ಬಗರ್ ಹುಕುಂ ಹಕ್ಕು ಪತ್ರ ವಿತರಣೆ ಮಾಡುವಂತೆ ಸರಕಾರ ಆದೇಶ ನೀಡಿದೆ. ಆದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಕುರಿತು ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ಕಾಗೋಡು ತಿಮ್ಮಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಈ ವೇಳೆ ಶಾಸಕರಾದ ಪ್ರಸನ್ನ ಕುಮಾರ್, ಶಾರದಾ ಪೂರ್ನಾನಾಯ್ಕ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ವಿವರಗಳನ್ನು ಕಾಲ್‌ಗರ್ಲ್ ಸೈಟ್‌ಗೆ ಅಪ್ಲೋಡ್ ಮಾಡಿದ ಪತಿಮಹಾಶಯ