Daily Horoscope

Select Your Language

Notifications

webdunia
webdunia
webdunia
webdunia

ಬಗರ್ ಹುಕುಂ ಜಮೀನು ಮಂಜೂರಾತಿ ಅಕ್ರಮ: ಸಿಐಡಿ ವಶಕ್ಕೆ ಮಾಜಿ ಶಾಸಕ ಲಿಂಗೇಶ್‌

Bagar Hukum Land Sanction Illegality
ಬೇಲೂರು: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಎಸಗಿದ 2023ರ ಆರೋಪ ಸಂಬಂಧ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಶುಕ್ರವಾರ ಬೆಳಿಗ್ಗೆ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. 

ಬೇಲೂರು ತಾಲ್ಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅವರು ಬೇಲೂರು ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿತ್ತು.

ದೂರಿನಲ್ಲಿ ಸುಮಾರು 2,750 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1,430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಪ್ರಕರಣ ಸಂಬಂಧ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ (ಹಿಂದಿನ ಐಪಿಸಿ ಸೆಕ್ಷನ್‌ಗಳಾದ 420, 464, 465, 468, 471, 409 ಹಾಗೂ 120(ಬಿ)) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣ ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್‌ ತನಿಖೆ ಮುಂದುವರಿಸಲು ಸೂಚಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ: ಬಿ.ವೈ. ವಿಜಯೇಂದ್ರ