Select Your Language

Notifications

webdunia
webdunia
webdunia
webdunia

ಜಾಮೀನಿಗೆ ಸುಪ್ರೀಂ ತಡೆ: ಮುರುಘಾ ಶರಣರು ಮತ್ತೇ ಜೈಲಿಗೆ

Murugha Sharanaru

Sampriya

ಚಿತ್ರದುರ್ಗ , ಮಂಗಳವಾರ, 23 ಏಪ್ರಿಲ್ 2024 (16:25 IST)
Photo Courtesy X
ಚಿತ್ರದುರ್ಗ: ಫೋಕ್ಸೋ ಪ್ರಕರಣದ  ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್‌ ಇಂದು ತಡೆ ನೀಡಿದೆ.

ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿದೆ. ಜತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ 'ಸುಪ್ರೀಂ' ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರೊಂದಿಗೆ ಶಿವಮೂರ್ತಿ ಮುರುಘಾ ಶರಣರು  ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಅವರನ್ನು ಬಂಧಿಸಲಾಗಿದೆ. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯ ಕಾರ್ಯದರ್ಶಿ ಅಮಾನತಿಗೆ ಬಿಜೆಪಿ ಒತ್ತಾಯ