Webdunia - Bharat's app for daily news and videos

Install App

ಜಾಮೀನಿಗೆ ಸುಪ್ರೀಂ ತಡೆ: ಮುರುಘಾ ಶರಣರು ಮತ್ತೇ ಜೈಲಿಗೆ

Sampriya
ಮಂಗಳವಾರ, 23 ಏಪ್ರಿಲ್ 2024 (16:25 IST)
Photo Courtesy X
ಚಿತ್ರದುರ್ಗ: ಫೋಕ್ಸೋ ಪ್ರಕರಣದ  ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್‌ ಇಂದು ತಡೆ ನೀಡಿದೆ.

ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಸೂಚಿಸಿದೆ. ಜತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ 'ಸುಪ್ರೀಂ' ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರೊಂದಿಗೆ ಶಿವಮೂರ್ತಿ ಮುರುಘಾ ಶರಣರು  ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಅವರನ್ನು ಬಂಧಿಸಲಾಗಿದೆ. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ