ಜಾಮೀನು ಅರ್ಜಿ ತಿರಸ್ಕರಿಸಿದ್ದಕ್ಕೆ ಸಿಟ್ಟಿಗೆದ್ದ ಆರೋಪಿ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆ ಬೀದರ ಸೇಷನ್ಸ್ ಕೋರ್ಟ್‌ನಲ್ಲಿ ನಡೆದಿದೆ.
ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಮಹಮ್ಮದ್ ರಾಯಿಸ್ ಎಂಬ ಆರೋಪಿಯ ಜಾಮೀನು ಅರ್ಜಿಯನ್ನು ಸೇಷನ್ಸ್ ಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದ್ದರು. ಇದಕ್ಕೆ ಕೋಪಗೊಂಡ ಆರೋಪಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ ಎನ್ನಲಾಗಿದೆ.
ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆಯನ್ನು ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅನಿಲ್ ತೀವ್ರವಾಗಿ ಖಂಡಿಸಿದ್ದು, ಕೋರ್ಟ್ ಕಲಾಪವನ್ನು ಬಹಿಷ್ಕರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ