ಕೋಲಾರ: ನವೆಂಬರ್ 21ರಂದು ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆಂಬ ವದಂತಿ ಬಗ್ಗೆ ಸಚಿವ ಬೈರತಿ ಸುರೇಶ್ ಅವರು ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬದಲಾವಣೆಯ ವಿಚಾರವನ್ನು ಮಾಧ್ಯಮಗಳು ಸೃಷ್ಟಿಸಿರುವುದೇ ಹೊರತು ನಾವಲ್ಲ ಎಂದು ಸ್ಪಷ್ಟನೆ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಯಾರು. ಈ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆಯೇ? ಯಾರಾದರೂ ದಿನಾಂಕ ನಿಗದಿಪಡಿಸಿದ್ದಾರೆಯೇ? ಈ ಸಂಬಂಧ ಏನಾದರೂ ದಾಖಲೆ ಇದೆಯೇ ಎಂದು ಪ್ರಶ್ನೆ ಹಾಕಿದರು.
ಪಕ್ಷದ ಕಟ್ಟಾಳುಗಳಾಗಿರುವ ನಾವೆಲ್ಲ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹೈಕಮಾಂಡ್ ಹೇಳಿದಂತೆ ಕೇಳುವವರು. ಹೀಗಾಗಿ, ಮತ್ತೊಬ್ಬರ ಮಾತಿಗೆ ಕಿವಿಗೊಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.