ಎಸ್`ಡಿಪಿಐ ಮುಖಂಡ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಬಜರಂಗದಳದ ಮುಖಂಡ ಭರತ್ ಕುಮ್ಡೇಲ್`ನನ್ನ ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನ ಬಂಧಿಸಿದ್ದ ಪೊಲೀಸರು ತಲೆಮರೆಸಿಕೊಂಡಿದ್ದ ಪುತ್ತೂರು ವಲಯದ ಬಜರಂಗದಳದ ಸಂಚಾಲಕ ಭರತ್ ಕುಮ್ಡೇಲ್`ನನ್ನ ಿವತ್ತು ಸೆರೆಹಿಡಿದಿದ್ದಾರೆ.
ರಿಕ್ಷಾ ಚಾಲಕರಾಗಿದ್ದ ಮೊಹಮ್ಮದ್ ಅಶ್ರಫ್ ಅವರನ್ನ ಜೂನ್ 21ರಂದು ಬೆಂಜನಪದವು ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈಗಾಗಲೇ, ಮತೀಯ ಸೂಕ್ಷ್ಮ ಪ್ರದೇಶ ದಕ್ಷಿಣ ಕನ್ನಡ ಜಿಲ್ಲೆ ಮತ್ತಷ್ಟು ಉದ್ವಿಗ್ನಗೊಂಡಿತ್ತು. ಪ್ರಮುಖ ಆರೋಪಿ ಬಜರಂಗದಳದ ಮುಖಂಡ ಭರತ್ ಕುಮ್ಡೇಲ್ ಬಂಧನದ ಬಳಿಕ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ