ಬಿಮ್ಸ್ ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Krishnaveni K
ಭಾನುವಾರ, 8 ಡಿಸೆಂಬರ್ 2024 (14:22 IST)
ಬಳ್ಳಾರಿ: ಇತ್ತೀಚೆಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ಬಾಣಂತಿಯರ ಸರಣಿ ಸಾವಿನ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.

ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.  ಸಂಡೂರಿನಲ್ಲಿ ಇಂದು ಅಭಿನಂದನಾ ಸಮಾರಂಭದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಈಗಾಗಲೇ 2 ಲಕ್ಷ ರೂ. ಪರಿಹಾರ ನೀಡಿದ್ದೇವೆ ಇನ್ನೂ 3 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.

ಈಗಾಗಲೇ ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಟೀಕೆಗೆ ಗುರಿಯಾಗಿತ್ತು. ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಈ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪವಾಗಲಿದೆ. ಇದರ ಬೆನ್ನಲ್ಲೇ ಸಚಿವರು ಪರಿಹಾರ ಘೋಷಣೆ ಮಾಡಿದ್ದಾರೆ.

ನವಂಬರ್ 9 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಎಲ್ಲಾ ಗರ್ಭಿಣಿಯರಿಗೆ ಸಿಸೇರಿಯನ್ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಐವರು ಮೃತಪಟ್ಟಿದ್ದಾರೆ. ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊನ್ನೆಯಷ್ಟೇ ಸುಮಯಾ ಎಂಬ ಬಾಣಂತಿ ಸಾವಿಗೀಡಾಗಿದ್ದರು. ಕಳಪೆ ಗುಣಮಟ್ಟದ ಔಷಧಿಯಿಂದಲೇ ಸಾವು ಸಂಭವಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments