Publish Date: Fri, 28 Jul 2023 (12:51 IST)
Updated Date: Fri, 28 Jul 2023 (12:42 IST)
ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಶೀಘ್ರದಲ್ಲೇ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ ಹೇರುವ ಕುರಿತು ತೀರ್ಮಾನ ಮಾಡಲಾಗಿದ್ದು, ಬೈಕ್, ಆಟೋ, ಟ್ರ್ಯಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿರ್ಬಂಧ ಹೇರಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.
ಈ ಸಂಬಂಧ ಜುಲೈ 12ರಂದು ರಾಷ್ಟ್ರೀಯ ಹೆದ್ದಾರಿ ನಿಯಂತ್ರಣ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಅಲ್ಲದೇ ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ವೇಗಮಿತಿ ನಿಗದಿ ಮಾಡಲಾಗಿದ್ದು ಗಂಟೆಗೆ 80 ರಿಂದ 100 ಕಿ.ಮೀಗೆ ಮಿತಿ ಹೇರಿರುವ ಕುರಿತು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.