ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7 ಕೋಟಿ ರೂ. ದೋಚಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ದರೋಡೆಕೋರರನ್ನು ಈಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದು ಎರಡು ದಿನಗಳಾದರೂ ದರೋಡೆಕೋರರನ್ನು ಬಂಧಿಸಿಲ್ಲ ಎಂದು ಪೊಲೀಸರ ಮೇಲೆ ಜನರು, ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಆದರೆ ಈಗ ದರೋಡೆಕೋರರನ್ನು ಚೆನ್ನೈನಲ್ಲಿ ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ.
ಇದೀಗ ಆರೋಪಿಗಳಿಂದ 6.3 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ. ದರೋಡೆಕೋರರು ಎಟಿಎಂ ವಾಹನದಿಂದ 7.11 ಕೋಟಿ ರೂ. ದೋಚಿದ್ದರು. ಇದೀಗ ಉಳಿದ ಹಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಬಂದಿದ್ದ ದರೋಡೆಕೋರರು ಎಟಿಎಂ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದೋಚಿದ್ದರು. ಬಳಿಕ ಎಟಿಎಂ ವಾಹನವನ್ನು ಅರ್ಧದಲ್ಲಿಯೇ ಬಿಟ್ಟು ತಮ್ಮ ಇಂಡಿಯಾ ಕಾರಿನಲ್ಲಿ ಪರಾರಿಯಾಗಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.