Select Your Language

Notifications

webdunia
webdunia
webdunia
webdunia

ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು

ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು
ಬೆಂಗಳೂರು , ಬುಧವಾರ, 30 ಮಾರ್ಚ್ 2022 (14:45 IST)
ಬೆಂಗಳೂರು : ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು,
 
ಏಪ್ರಿಲ್ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ ಆವೃತ್ತಿಯನ್ನು ಆಯೋಜಿಸುವುದು ನಮ್ಮ ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯ.

ಏಪ್ರಿಲ್ 24 ರಿಂದ ಮೇ 03 ವರೆಗೂ ನಡೆಯಲಿದ್ದು, ಏಪ್ರಿಲ್ 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್, ಜೆರ್ಸಿ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು,

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವಜನ ಮತ್ತು ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಂದ್ರ ಗೃಹ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಏಪ್ರಿಲ್ 24 ರಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನೆಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಲಿದ್ದಾರೆ. ಅಲ್ಲದೇ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಜೈನ್ ವಿವಿ ಕ್ಯಾಂಪಸ್, ಕಂಠೀರವ ಕ್ರೀಡಾಂಗಣದಲ್ಲಿ ಗೇಮ್ಸ್ಗಳು ನಡೆಯಲಿವೆ. ಈ ಕ್ರೀಡಾಕೂಟವನ್ನು ಅದ್ಧೂರಿಯಾಗಿ ಆಯೋಜಿಸಲು ಆರು ತಿಂಗಳಿನಿಂದ ಸಿದ್ಧತೆ ನಡೆಸುತ್ತಿದ್ದು, ಕಳೆದ ಎರಡು ತಿಂಗಳಿಂದ ಪ್ರತಿನಿತ್ಯ ವಿಶೇಷ ನಿಗಾವಹಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಾ ಥೀಮ್ ಸಾಂಗ್ನ್ನು ಕನ್ನಡದ ಖ್ಯಾತ ರಾರ್ಪರ್, ಗಾಯಕ ಚಂದನ್ ಶೆಟ್ಟಿ ಕಂಪೋಸ್ ಮಾಡಿದ್ದಾರೆ. ಕ್ರೀಡೆ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಸರ್ಕಾರದ ಉದ್ದೇಶವಾಗಿದ್ದು ಈ ಕಾರಣಕ್ಕಾಗಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ಅನ್ನು ಹಸಿರು ಕ್ರೀಡಾಕೂಟ (ಗ್ರೀನ್ ಗೇಮ್ಸ್)ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದಲ್ಲಿ ಲಾಕ್ಡೌನ್ ಜಾರಿ !