Select Your Language

Notifications

webdunia
webdunia
webdunia
webdunia

ನಗರದ ಹಲವೆಡೆ ಗಾಳಿ, ಆಲಿಕಲ್ಲು ಸಹಿತ ಮಳೆ

ನಗರದ ಹಲವೆಡೆ ಗಾಳಿ, ಆಲಿಕಲ್ಲು ಸಹಿತ ಮಳೆ
bangalore , ಭಾನುವಾರ, 1 ಮೇ 2022 (20:36 IST)
ಬೆಂಗಳೂರು: ರಾಜ್ಯ ರಾಜ್ಯಧಾನಿಯ ಹಲವು ಕಡೆಗಳಲ್ಲಿ ಇಂದು(ಭಾನುವಾರ) ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಧಾರಾಕಾರವಾಗಿ ಮಳೆಯ ಆರ್ಭಟ ಪ್ರಾರಂಭವಾಗಿ ಜನಜೀವನ ಅಸ್ತವ್ಯಸ್ತವಾಗಿದೆ. 
 
ಮಡಿವಾಳ, ಕೋರಮಂಗಲ, ಸರ್ಜಾಪುರ, ಬನ್ನೇರುಘಟ್ಟ ರಸ್ತೆಯಲ್ಲಿ ಆಲಿಕಲ್ಲು ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ. ಗಾಂಧಿನಗರ, ಮಲ್ಲೇಶ್ವರ, ಶಿವಾನಂದ ವೃತ್ತ, ಕುಮಾರ ಪಾರ್ಕ್, ರಾಜಾಜಿನಗರ, ಸುಬ್ರಮಣ್ಯ ನಗರ, ಜಕ್ಕೂರು,ಯಲಹಂಕ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಮಳೆಯ ಕಾರಣಕ್ಕೆ ಟ್ರಾಫಿಕ್​ ಜಾಮ್​ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿವೆ. ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
 
ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲ ಜಿಲ್ಲೆಗಳಲ್ಲಿಯೂ ವರುಣನ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ಹೆಚ್ಚಿನ ಪ್ರದೇಶಗಳಲ್ಲಿ ಮಳೆಗಿಂತ ಗುಡುಗು, ಸಿಡಿಲುಗಳ ಆರ್ಭಟವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆ್ಯಸಿಡ್ ಕಿರಾತಕನ ಬಂಧನಕ್ಕೆ ಬಲೆ