Webdunia - Bharat's app for daily news and videos

Install App

ಬೆಂಗಳೂರು, ಎಲ್‌ಪಿಜಿ ಸಿಲಿಂಡರ್‌ ಸೋರಿಕೆ ದುರಂತ: ಇಬ್ಬರು ಸಜೀವ ದಹನ

Sampriya
ಗುರುವಾರ, 1 ಮೇ 2025 (15:26 IST)
ಬೆಂಗಳೂರು: ಉತ್ತರ ತಾಲ್ಲೂಕಿನ ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಾಗಿ ಇಬ್ಬರು ಸಜೀವ ದಹನವಾಗಿ, ನಾಲ್ವರು ಗಂಭೀರವಾಗಿ ಘಟನೆ ಇಂದು ನಡೆದಿದೆ.

ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

ಗಾಯಗೊಂಡ ಅಭಿಷೇಕ್ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂದ ಮಾದನಾಯಕನಹಳ್ಳಿ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಪೊಲೀಸರ ಪ್ರಕಾರ, ನಾಗರಾಜು ಬಳ್ಳಾರಿ ಮೂಲದವರಾಗಿದ್ದು, ಪತ್ನಿ ಲಕ್ಷ್ಮಿದೇವಿ ಮತ್ತು ಮಕ್ಕಳಾದ ಅಭಿಷೇಕ್ ಗೌಡ ಮತ್ತು ಬಸನ ಗೌಡ ಅವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಗ್ಯಾಸ್ ಖಾಲಿಯಾಗಿದ್ದಾಗ ಮತ್ತೊಂದು ಸಿಲಿಂಡರ್ ಅನ್ನು ಜೋಡಿಸಿದ ಅಭಿಷೇಕ್ ಅನಿಲ ಸೋರಿಕೆಯಾಗಿರುವುದನ್ನು ಗಮನಿಸಿಲ್ಲ. ಬಳಿಕ ದೇವರ ಫೋಟೊ ಮುಂದೆ ದೀಪ ಹಚ್ಚಿದಾಗ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಮನೆಗೆ ಬೆಂಕಿ ವ್ಯಾಪಿಸಿದೆ ಎಂದು ವರದಿಯಾಗಿದೆ.

ಬೆಂಕಿ ಮನೆಗೆ ಆವರಿಸುತ್ತಿದ್ದಂತೆ, ಲಕ್ಷ್ಮಿದೇವಿ ಮತ್ತು ಬಸನಗೌಡ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನಾಗರಾಜು ಮತ್ತು ಅಭಿಷೇಕ್ ಒಳಗೆ ಸಿಲುಕಿಕೊಂಡಿದ್ದಾರೆ. ಆಗ ನೆರೆಮನೆಯ ಶ್ರೀನಿವಾಸ್ ಮತ್ತು ಮನೆ ಮಾಲೀಕ ಶಿವಶಂಕರ್ ಬೆಂಕಿಯನ್ನು ನಂದಿಸಲು ಮತ್ತು ಸಂತ್ರಸ್ತರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ.

ದುರಂತವೆಂದರೆ, ನಾಗರಾಜು ಮತ್ತು ಅಭಿಷೇಕ್ ಅವರನ್ನು ಉಳಿಸಲು ಪ್ರಯತ್ನಿಸುವಾಗ, ಶ್ರೀನಿವಾಸ್ ಬೆಂಕಿಯಲ್ಲಿ ಸಿಲುಕಿಕೊಂಡು ಜೀವಂತ ದಹನವಾಗಿದ್ದಾರೆ.  ಗಾಯಾಳುಗಳು ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ಎಲ್‌ಪಿಜಿ ಸಿಲಿಂಡರ್‌ ಸೋರಿಕೆ ದುರಂತ: ಇಬ್ಬರು ಸಜೀವ ದಹನ

KN Rajanna: ಸಿದ್ದರಾಮಯ್ಯನದ್ದು ಸ್ವಚ್ಛ ಹೃದಯ, ಶ್ರೀಮಂತ ಹೃದಯ ರೀ..: ಕೆಎನ್ ರಾಜಣ್ಣ

ಗುಂಪು ಹಲ್ಲೆಯಿಂದ ಮೃತಪಟ್ಟ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್‌ ಸಹಿತ ಮೂವರು ಅಮಾನತು

ಪಾಕ್‌ಗೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಿ: ಎಲ್ಲರೂ ಮೋದಿ ಪರ ನಿಲ್ಲಿ ಎಂದ ವಿಶ್ವನಾಥ್‌

ಕೇಂದ್ರ ಜಾತಿಗಣತಿ ಸಮಾನ ಹಕ್ಕಿಗಾಗಿ, ಕಾಂಗ್ರೆಸ್ ನಂತೆ ಜಾತಿ ನಡುವೆ ವಿಷ ಬೀಜ ಬಿತ್ತಲು ಅಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments