Select Your Language

Notifications

webdunia
webdunia
webdunia
webdunia

ಬೆಂಗಳೂರು ಮಾಲ್ ಬೆಂಕಿ ಅವಘಡ

Corona
ಸಿಲಿಕಾನ್ ಸಿಟಿಯಲ್ಲಿ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೌತ್ ಇಂಡಿಯಾ ಮಾಲ್‍ನಲ್ಲಿರುವ ರಿಲಯನ್ಸ್ ಮಳಿಗೆ ಹೊತ್ತಿ ಉರಿದಿದೆ. ಬನ್ನೇರುಘಟ್ಟ ರಸ್ತೆಯ ಅರಕೆರೆ ಸಿಗ್ನಿಲ್ ಬಳಿ ಈ ಮಳಿಗೆ ಇದ್ದು , ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಾಪಕವಾಗಿ ಹರಡಿದೆ.
ಸುದ್ದಿ ತಿಳಿದ ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ 8 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಸತತ ಏಳೆಂಟು ಗಂಟೆ ಪರಿಶ್ರಮದಿಂದ ಬೆಂಕಿ ನಂದಿಸಲು ಹರಸಾಹಸಪಟ್ಟು ಕೊನೆಗೂ 11 ಗಂಟೆ ಸುಮಾರಿಗೆ ಬೆಂಕಿ ತಹಬದಿಗೆ ಬಂದಿದ್ದು, ಹೆಚ್ಚಿನ ದುರಂತ ತಪ್ಪಿದಂತಾಗಿದೆ.
 
ಈ ಕಟ್ಟಡದ ನೆಲಮಾಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು , ಅಲ್ಲಿದ್ದ ವಸ್ತುಗಳು, ಬಟ್ಟೆಗಳು ಹೊತ್ತಿ ಉರಿದು ಮಾಳಿಗೆ ಪೂರ್ತಿ ಅವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದ್ದು , ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಅಗ್ನಿ ದುರಂತದಿಂದ ಆದ ನಷ್ಟದ ಬಗ್ಗೆ ಸದ್ಯಕ್ಕೆ ತಿಳಿದುಬಂದಿಲ್ಲ.
 
ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದು , ತನಿಖೆ ಕೈಗೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ ರಾಜ್ಯಪಾಲರು