Publish Date: Fri, 01 Jul 2022 (16:00 IST)
Updated Date: Fri, 01 Jul 2022 (16:03 IST)
31 ವರ್ಷದ ದೀಪಾ ಹಾಗೂ ಮೂರುವರೆ ವರ್ಷದ ಮಗು ರಿಯಾ ಸಾವನ್ನಪ್ಪಿದವರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಪತಿ ಆದರ್ಶ್ 2017ರಲ್ಲಿ ದೀಪಾ ಅವರನ್ನು ಮದುವೆಯಾಗಿದ್ದರು. ಆರ್.ಆರ್ ನಗರದ ಮಂತ್ರಿ ಅಪಾರ್ಟ್ಮೆಂಟ್ನಲ್ಲಿ ದಂಪತಿ ವಾಸವಿದ್ದರು.
ಕಳೆದ ಒಂದು ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ಬಳಲುತಿದ್ದ ದೀಪಾ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೂ ನೋವು ಕಡಿಮೆಯಾಗಿರಲಿಲ್ಲ. ನಿನ್ನೆ ರಾತ್ರಿ ನಿದ್ರಿಸುತ್ತಿದ್ದ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ಹತ್ಯೆ ಮಾಡಿದ್ದಾರೆ. ಬಳಿಕ ತಾನು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.