Publish Date: Fri, 14 Aug 2020 (09:47 IST)
Updated Date: Fri, 14 Aug 2020 (09:50 IST)
ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಕೆಜೆ ಜಾರ್ಜ್ ಸಹಾಯಕನನ್ನು ಬಂಧಿಸಲಾಗಿದೆ.
ಘಟನೆ ಸಂಬಂಧ ಪೊಲೀಸರು ಈಗಾಗಲೇ 200 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದೀಗ ಕೆಜೆ ಜಾರ್ಜ್ ಸಹಾಯಕರಾಗಿದ್ದ, ಕಲೀಂ ಪಾಶಾ ಎಂಬಾತನನ್ನು ಬಂಧಿಸಲಾಗಿದೆ. ಈತ ಬಿಬಿಎಂಪಿ ಕಾರ್ಪೋರೇಟರ್ ಬೇಗಂ ಪತಿ.
ಘಟನೆಗೆ ಎಸ್ ಡಿಪಿಐ ಕುಮ್ಮಕ್ಕು ಕಾರಣ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.