Webdunia - Bharat's app for daily news and videos

Install App

ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟಿಸಿದ ಸಿದ್ದರಾಮಯ್ಯ: ಸಿಎಂ ಕಾರಿನ ಮುಂದೆ ಸೆಲ್ಫೀಗೆ ಮುಗಿಬಿದ್ದ ಟೆಕಿಗಳು

Krishnaveni K
ಮಂಗಳವಾರ, 19 ನವೆಂಬರ್ 2024 (12:30 IST)
ಬೆಂಗಳೂರು: ಬೆಂಗಳೂರು ಟೆಕ್ ಸಮ್ಮಿಟ್ 2024 ಕಾರ್ಯಕ್ರಮವನ್ನು ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಸಿಎಂ ಸಮಾರಂಭಕ್ಕೆ ಬಂದಾಗ ಟೆಕಿಗಳು ಸಿಎಂ ಕಾರಿನ ಮುಂದೆ ನಿಂತು ಸೆಲ್ಫೀ ತೆಗೆಸಕೊಂಡಿದ್ದು ವಿಶೇಷವಾಗಿತ್ತು. ಬಳಿಕ ಸಭೆಯನ್ನುದ್ದೇಶಿಸಿ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.

ನಿಮ್ಮನ್ನು ಕುರಿತು  ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ. ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
  
ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. 20 ನೇ ಶತಮಾನದ ಆರಂಭದಲ್ಲಿ ,  ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು.

2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣಾ ಅವರ   ದೂರದೃಷ್ಟಿಯ ನಾಯಕತ್ವದಲ್ಲಿ,  ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು  ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ  ಹಾಕಲಾಯಿತು ಎಂದರು.

ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗು ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ.

ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು  ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ  ಉತ್ತೇಜಿಸಿದೆ. ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ  ನಮ್ಮ ಬದ್ಧತೆ ಆಚಲವಾಗಿದೆ ಎಂದಿದ್ದಾರೆ.

ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು  ಹಾಗೂ ಬೆಂಬಲಿಸಲು ಉದ್ದೇಶಿಸಿದೆ.ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು  ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು  ಈ  ಪಾರ್ಕ್ ಗಳು  ಮೀಸಲಾಗಿರುತ್ತದೆ ಎಂದರು.

ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ.

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ  ಅತ್ಯಧಿಕ ಎ ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐ ಪಿ ಯು ಎನ್ ಎ ಕರ್ನಾಟಕದಡಿಯಲ್ಲಿ  ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು  ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗ ತಾನೇ  ಮೈಕ್ರೋ ಸಾಫ್ಟ್, ಇಂಟೆಲ್ , ಆಕ್ಸೆಂಚರ್ , ಐ.ಬಿ.ಎಂ ಮತ್ತು ಬಿ ಎಫ್ ಎಸ್  ಕಾಂಸಾರ್ಟಿಯಂ  ಜೊತೆಗೆ  ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ  ವ್ಯಕ್ತಿಗಳನ್ನು ಕೌಶಲಯುಕ್ತ ಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನ ಫಿನ್ ಟೆಕ್ ಲೀಡರ್ ಶಿಪ್ ನಿಂದ ಹುಬ್ಬಳ್ಳಿ ಧಾರವಾಡದ ಇವಿ ಪ್ರಗತಿ ಮತ್ತು ಡ್ರೋನ್ ಗಳು ಹಾಗೂ ಮೈಸೂರು ಪಿಸಿಬಿ  ಕ್ಲಸ್ಟರ್ ಆಗುವವರೆಗೆ  ಕ್ಲಸ್ಟರ್ ಆಧಾರಿತ ಅನು ಸಂಧಾನದ ಮೂಲಕ ಸಮತೋಲಿತ ಪ್ರಾದೇಶಿಕ ಬೆಳವಣಿಗೆಯನ್ನು ಸಾಧಿಸಲಾಗುತ್ತಿದೆ.

ಬೆಂಗಳೂರಿನ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುತ್ತಲೇ  ಪ್ರಾದೇಶಿಕ ಬಲವನ್ನು ಸಜ್ಜುಗೊಳಿಸಲು ಹಾಗೂ ಹೂಡಿಕೆಗಳನ್ನು ಆಕರ್ಷಿಸಲು  ಸೂಕ್ತ ನೀತಿ ಮತ್ತು ಮೂಲ ಸೌಕರ್ಯಗಳನ್ನು  ಸೃಜಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

ಟೆಕ್ ಆಧಾರಿತ ವಲಯಗಳನ್ನು ಉತ್ತೇಜಿಸಲು ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯದ ಮೇಲೆ ನಮ್ಮ ಸರ್ಕಾರವು ಗಮನಾರ್ಹ ಹೂಡಿಕೆಗಳನ್ನು ಮಾಡಿದೆ. ಗ್ರಾಮೀಣ ಸಂಪರ್ಕಕ್ಕಾಗಿ  'ನಮ್ಮ ಗ್ರಾಮ ನಮ್ಮ ಯೋಜನೆ ' ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳು ಸಂಪರ್ಕ ಮತ್ತು ಆರ್ಥಿಕ ಅವಕಾಶಗಳನ್ನು ಕರ್ನಾಟಕದಾದ್ಯಂತ ವೃದ್ಧಿಸಿದೆ.

ಬಿಯಾಂಡ್ ಬೆಂಗಳೂರು ಕಾರ್ಯಕ್ರಮಗಳ ಮೂಲಕ ಬೆಳವಣಿಗೆಯ ಸೌಲಭ್ಯಗಳನ್ನು ಟೆಕ್ ವಲಯದಿಂದಾಚೆಗೂ ಕೊಂಡೊಯ್ಯುವುದರಲ್ಲಿ ನಮಗೆ ನಂಬಿಕೆಯಿದೆ. ಇದರಿಂದ ಗ್ರಾಮೀಣ ಪ್ರದೇಶಗಳಿಗೆ ತಂತ್ರಜ್ಞಾನ, ವಿದ್ಯಾರ್ಥಿಗಳಿಗೆ ಇ - ಶಿಕ್ಷಣದ ಸುಧಾರಣೆ ಮತ್ತು ಎಲ್ಲಾ ನಾಗರಿಕ ಸೇವೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ.

2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ ಅಪ್ ಪರಿಸರ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ.   ಒಟ್ಟು 3,036 ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ಕರ್ನಾಟಕ  ಭಾರತದ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ  ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ಉದ್ಯಮಿಗಳಿಗೆ ನಮ್ಮ  ಬೆಂಬಲ ಮತ್ತು  ವೈವಿಧ್ಯಮಯ ಅವಕಾಶಗಳನ್ನು ಬಿಂಬಿಸುತ್ತದೆ.

ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ನೊಂದಿನ ನಮ್ಮ ಸಹಯೋಗವು 100 ಧನಸಹಾಯ ಒದಗಿಸುವ ಸಂಸ್ಥೆಗಳೊಂದಿಗೆ 200 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಜೋಡಿಸಿದ್ದು , ಬಂಡವಾಳ, ಮಾರ್ಗದರ್ಶನ ಮತ್ತು ಬೆಳವಣಿಗೆಯ ಅವಕಾಶಗಳನ್ನು ಒದಗಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ನೈಜ  ಯಶಸ್ಸು ಒಳಗೊಳ್ಳುವ  ಬೆಳವಣಿಗೆಯಲ್ಲಿದೆ. - ಬೆಂಗಳೂರು ಮತ್ತು ಕರ್ನಾಟಕ ಎರಡರಲ್ಲೂ ಎಲ್ಲಾ ನಾಗರಿಕರು ಈ ಪರಿವರ್ತನೆಯಿಂದ ಈ ಪ್ರಯೋಜನ ಪಡೆಯುತ್ತಾರೆ ಎಂದು ಖಾತ್ರಿಪಡಿಸಿಕೊಳ್ಳಲಾಗಿದೆ.

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಅತ್ಯಂತ ಸಂತೋಷವಾಗಿದೆ.  ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸಧೃಢಗೊಳಿಸುತ್ತದೆಯಲ್ಲದೆಉದ್ಯೋಗಗಳನ್ನು ಸೃಷ್ಟಿಸಿ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲಿದೆ ಎಂದು ಸಿಎಂ ಹೇಳಿದರು.

ದೂರದೃಷ್ಟಿವುಳ್ಳ ನಮ್ಮ ನಾಯಕರು ಮತ್ತು ಪ್ರವರ್ತಕರು    ಹಾಕಿಕೊಟ್ಟ  ಅಡಿಪಾಯದ ಮೇಲೆ ನಾವೀನ್ಯತೆ ಮತ್ತು ಉದ್ಯಮಶೀಲತೆಯ ನೆಲೆ ಎಂಬ ಕರ್ನಾಟಕದ ದೀರ್ಘಕಾಲದ ಖ್ಯಾತಿಯನ್ನು ನಿರ್ಮಿಸಲಾಗಿದೆ .

ಈ ಪರಂಪರೆಯನ್ನು ವಿಸ್ತರಿಸಲು ನಾವು ಬದ್ಧರಾಗಿದ್ದು, ತಂತ್ರಜ್ಞಾನ ಮತ್ತು ಪ್ರಗತಿಯಲ್ಲಿ ಕರ್ನಾಟಕವು ಜಾಗತಿಕ ನಾಯಕನಾಗಿ ಉಳಿಯಲಿರುವುದನ್ನು ಖಾತ್ರಿಪಡಿಸುತ್ತೇವೆ. ನಾವೀನ್ಯತೆ, ಸಹಯೋಗ ಮತ್ತು ಬೆಳವಣಿಗೆಯ ಈ ಪ್ರಯಾಣದಲ್ಲಿ ನಮ್ಮೊಂದಿಗೆ  ಕೈಜೋಡಿಸಿದ್ದಕ್ಕಾಗಿ  ಒಟ್ಟಾಗಿ, ನಾವು ಕರ್ನಾಟಕ ಮತ್ತು ಅದರಾಚೆಗಿನ ಪರಿವರ್ತನೆಯನ್ನು ಮುಂದುವರಿಸೋಣ ಎಂದು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments