Daily Horoscope

Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಮಳೆ, ಯಾವಾಗಿನಿಂದ ಇಲ್ಲಿದೆ ಡೀಟೈಲ್ಸ್

Bangalore Rains
ಬೆಂಗಳೂರು: ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ಬೆಂಗಳೂರು ಮಳೆ ಮತ್ತೆ ಶುರುವಾಗಲಿದೆ. ಕೆಲವು ದಿನಗಳ ಬ್ರೇಕ್ ಗಳ ನಂತರ ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಯಾವಾಗಿನಿಂದ ಎಂಬ ಡೀಟೈಲ್ಸ್ ಇಲ್ಲಿದೆ.

ರಾಜ್ಯಾದ್ಯಂತ ಒಣ ಹವೆ ಮುಂದುವರಿದಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ನವಂಬರ್ 13 ರಿಂದ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಕೆಲವೆಡೆ ಸಣ್ಣ ಮಳೆಯಾಗಿತ್ತು.

ಬೆಂಗಳೂರಿನಲ್ಲಿ ಇಂದು ಒಂದು ರೀತಿಯ ಮೋಡ ಕವಿದ ವಾತಾವರಣವಿದೆ. ಬಿಸಿಲಿನ ತೀವ್ರತೆ ಕೊಂಚ ಕಡಿಮೆಯಾಗಿದ್ದು, ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಇತರೆ ಎಲ್ಲಾ ಜಿಲ್ಲೆಗಳಲ್ಲಿ ನವಂಬರ್ 14 ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೋಭಾ ಕರಂದ್ಲಾಜೆ ವಿರುದ್ಧ ಎಸ್ ಟಿ ಸೋಮಶೇಖರ್ ಹೇಳಿಕೆ ಬಿಜೆಪಿ ಗರಂ