Select Your Language

Notifications

webdunia
webdunia
webdunia
webdunia

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಆವರಣ ಸ್ವಚ್ಚತಾ ಅಭಿಯಾನ

ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಆವರಣ ಸ್ವಚ್ಚತಾ ಅಭಿಯಾನ
bangalore , ಬುಧವಾರ, 23 ನವೆಂಬರ್ 2022 (15:21 IST)
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಆವಣದಲ್ಲಿ ಇಂದು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ ಜಿ.ಟಿ ದೇವರಾಜ್ ಉತ್ತಮ ಪರಿಸರ ಇದ್ದಲ್ಲಿ ಉತ್ತಮ ಆರೋಗ್ಯ ಇರುತ್ತದೆ ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಘನತ್ಯಾಜ್ಯ,ದ್ರವತ್ಯಾಜ್ಯಗಳನ್ನು ಬೇರ್ಪಡಿಸಿ ಮರುಬಳಕೆ ಮಾಡಿದಾಗ ಪರಿಸರಕ್ಕೆ ಆಗುವ ಹಾನಿಯನ್ನು ತಡೆಯಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಎನ್ಎಸ್ಎಸ್ ಸಮನ್ವಯ ಅಧಿಕಾರಿ ಡಾ. ಎಚ್.ಆರ್.ರಾವೀಶ್, ಡಾ ಗಿರೀಶ್ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ಗೃಹರಕ್ಷಕ ದಳ, ಹೊರಗುತ್ತಿಗೆ ನೌಕರರು, ಸ್ನಾತಕೋತ್ತರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಟಿಕೆಟಿಗಾಗಿ ಶಕ್ತಿ ಪ್ರದರ್ಶನ