Publish Date: Mon, 14 Mar 2022 (17:07 IST)
Updated Date: Mon, 14 Mar 2022 (17:10 IST)
ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣ ಸಂಬಂಧ ಮುರಗೋಡ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಯರಗಟ್ಟಿ ಗ್ರಾಮದ ಸಂತೋಷ ಕಂಬಾರ(31) ಹಾಗೂ ಸವದತ್ತಿ ತಾಲೂಕಿನ ಜೀವಾಪೂರ ಗ್ರಾಮದ ಗಿರೀಶ ಬೆಳವಲ(26) ಬಂಧಿತ ಆರೋಪಿಗಳು. ಬಂಧಿತರಿಂದ 4.37ಕೋಟಿ ನಗದು,1.63 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 6 ಕೋಟಿ ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂದೇ ವಾರದಲ್ಲಿ ಖದೀಮರು ಅರೆಸ್ಟ್: ಮಾರ್ಚ್6ರಂದು ಮುರಗೋಡ ಡಿಸಿಸಿ ಬ್ಯಾಂಕ್ನಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಬ್ಯಾಂಕ್ ಮ್ಯಾನೇಜರ್ ಕೃಷ್ಣಪ್ಪ ಯಲಿಗಾರ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಒಂದೇ ವಾರದಲ್ಲಿ ಖದೀಮರನ್ನು ಬಂಧಿಸಿದ್ದಾರೆ.