Publish Date: Thu, 31 Aug 2023 (08:59 IST)
Updated Date: Thu, 31 Aug 2023 (10:00 IST)
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಅನುಮತಿ ಪಡೆಯದೇ ಬ್ಯಾನರ್ ಹಾಕಿದ್ದು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಾಲಿಕೆಯಿಂದ 5,000 ರೂ. ದಂಡ ವಿಧಿಸಲಾಗಿದೆ.
ಕಲಬುರಗಿ ನಗರದ ಹೊರವಲಯದ ಬಂಗರಗಾ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದ ಸಂದರ್ಭದಲ್ಲಿ ಖರ್ಗೆ ಬೆಂಬಲಿಗರು ಸ್ವಾಗತ ಕೋರುವ ಹಿನ್ನೆಲೆಯಲ್ಲಿ ಬ್ಯಾನರ್ ಹಾಕಿದ್ದರು.