ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27ರಂದು  ನಡೆದ ರಹೀಂ ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅದಲ್ಲದೆ ರಹೀಂ ಜತೆಗಿದ್ದ ಕಲಂಧರ್ ಶಾಫಿ ಮೇಲೆ ನಡೆಸಲಾಗಿದೆ.
									
			
			 
 			
 
 			
					
			        							
								
																	ಸಂಬಂಧಿಸಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇರಾಕೋಡಿ ನಿವಾಸಿ ದೀಪಕ್ ಸಹಿತ ಮೂವರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
									
										
								
																	ಇವರು ನೀಡಿದ ಮಾಹಿತಿಯಂತೆ ಇನ್ನಷ್ಟು ಮಂದಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
									
											
							                     
							
							
			        							
								
																	ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 15 ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದವಾರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.