Select Your Language

Notifications

webdunia
webdunia
webdunia
webdunia

ಯಕ್ಷಗಾನದ ಹಾಸ್ಯರಾಜ ಖ್ಯಾತಿಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

ಯಕ್ಷಗಾನದ ಹಾಸ್ಯರಾಜ ಖ್ಯಾತಿಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Sampriya

ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2024 (14:24 IST)
Photo Courtesy X
ಬೆಂಗಳೂರು: ಯಕ್ಷಗಾನದ ಹಾಸ್ಯರಾಜ ಎಂದೇ ಹೆಸರಾಗಿದ್ದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಶುದ್ಧ ಹಾಸ್ಯ ನೀಡುವ ಮೂಲಕ ಯಕ್ಷಗಾನ ಪ್ರಿಯ ಪ್ರೇಕ್ಷಕರ ಮನರಂಜಿಸುತ್ತಿದ್ದ ಜಯರಾಮ ಆಚಾರ್ಯ ಅವರು ಹತ್ತಾರು ಮೇಳಗಳಲ್ಲಿ ಐದು ದಶಕಗಳ ಕಾಲ  ಯಕ್ಷಗಾನ ತಿರುಗಾಟ ನಡೆಸಿದ್ದರು.

ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡವು ಇಂದಿನಿಂದ ಬೆಂಗಳೂರಿನಲ್ಲಿ ನಡೆಸಿಕೊಡಬೇಕಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಯರಾಮ ಆಚಾರ್ಯರು ಆಗಮಿಸಿದ್ದರು. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಹೃದಯನೋವು ಕಾಣಿಸಿಕೊಂಡಿದೆ. ಅವರೊಂದಿಗಿದ್ದ ಇತರ ಕಲಾವಿದರು ತಕ್ಷಣ ಆಸ್ಪತ್ರೆಗೆ ಸೇರಿಸಿದರೂ, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.  

ಬಂಟ್ವಾಳ ಜಯರಾಮ ಆಚಾರ್ಯರ ಪಾರ್ಥಿವ ಶರೀರವನ್ನು ಆ್ಯಂಬುಲೆನ್ಸ್ ಮೂಲಕ ತವರಿಗೆ ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಬಂಟ್ವಾಳ ಬೈಪಾಸ್‌ನಲ್ಲಿರುವ ಮನೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬಳಿಕ ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬಂಟ್ವಾಳದಲ್ಲಿ ಜನಿಸಿದ ಜಯರಾಮ ಆಚಾರ್ಯರು ತಂದೆಯ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಧರ್ಮಸ್ಥಳ, ಕಟೀಲು, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು. ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಹಾಗೂ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮೇಲೆ ನವದಂಪತಿಗಳು 16 ಮಕ್ಕಳನ್ನು ಹಡೆಯುವ ಸಂಕಲ್ಪ ಮಾಡಬೇಕು: ಎಂಕೆ ಸ್ಟಾಲಿನ್