Select Your Language

Notifications

webdunia
webdunia
webdunia
webdunia

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Sampriya

ಬಳ್ಳಾರಿ , ಭಾನುವಾರ, 29 ಜೂನ್ 2025 (16:36 IST)
Photo Credit X
ಬಳ್ಳಾರಿ: ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ ಅವರು ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿಯಾಗಿ ನೇಮಕಗೊಂಡಿದ್ದಾರೆ.

ಬಳ್ಳಾರಿಯ ಖಾಸಗಿ ಹೋಟೆಲ್​​ನಲ್ಲಿ ಇಂದು ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು, ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಬಾನು ಮುಷ್ತಾಕ್ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಆಯ್ಕೆಯನ್ನು ಬಾನು ಮುಷ್ತಾಕ್ ಸಂತೋಷದಿಂದ ಒಪ್ಪಿ ಕನ್ನಡದ ಕೆಲಸ ನನ್ನ ಮೊದಲ ಕರ್ತವ್ಯ ಎಂದು ಹೇಳಿರುವುದನ್ನು ತಿಳಿಸಲು ಕನ್ನಡ ಸಾಹಿತ್ಯ ಪರಿಷತ್ ಹೆಮ್ಮೆಪಡುತ್ತದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು