Webdunia - Bharat's app for daily news and videos

Install App

ಬಾಣಂತಿಯರ ಸರಣಿ ಸಾವು ಪ್ರಕರಣ, ವರದಿಯನ್ನು ಮುಚ್ಚಿಟ್ಟು ಸರ್ಕಾರ ಯಾರನ್ನು ರಕ್ಷಿಸುತ್ತಿದೆ: ಅಶೋಕ್ ಪ್ರಶ್ನೆ

Sampriya
ಶುಕ್ರವಾರ, 29 ನವೆಂಬರ್ 2024 (17:35 IST)
ಬೆಂಗಳೂರು: ಬಳ್ಳಾರಿಯ ಜಿಲ್ಲಾಸ್ಪತ್ರೆ ಹಾಗು ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ 5 ಬಾಣಂತಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನು ಕಾಂಗ್ರೆಸ್‌ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ವ್ಯಕ್ತಪಡಿಸಿದರು.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಸರಣಿ ಸಾವಿನ ಬೆನ್ನಲ್ಲೇ, ನವೆಂಬರ್ 16ನೆ ತಾರೀಖಿನಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ Ringer Lactate Infusion ಔಷದಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ.

ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ? ಈ ಕಳಪೆ ಗುಣಮಟ್ಟದ ಔಷಧಿ ಪೂರೈಕೆಗೆ, ಬಳಕೆಗೆ ಹೊಣೆ ಯಾರು? ಸರ್ಕಾರ ವರದಿಯನ್ನ ಮುಚ್ಚಿಡುವ ಮೂಲಕ ಯಾರನ್ನು ರಕ್ಷಿಸುತ್ತಿದೆ?

ಇಡೀ ಕರ್ನಾಟಕವೇ ಬೆಚ್ಚಿ ಬೀಳುವ ಇಂತಹ ಆಘಾತಕಾರಿ ಘಟನೆ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ
 ಅವರಾಗಲಿ, ಡಿಸಿಎಂ ಡಿಕೆ ಶಿವಕುಮಾರ್ ಅವರಾಗಲಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದಿರಲಿ, ಕನಿಷ್ಠ ಪಕ್ಷ ಸಂತಾಪ ಕೂಡ ಸೂಚಿಸಿಲ್ಲ. ಇನ್ನು ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಅವರು ಈವರೆಗೂ ಜಿಲ್ಲೆಗೆ ಭೇಟಿ ನೀಡುವ ಗೋಜಿಗೂ ಹೋಗಿಲ್ಲ.

ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಾಗು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು ಕೂಡಲೇ ರಾಜೀನಾಮೆ ನೀಡಬೇಕು. ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments