Select Your Language

Notifications

webdunia
webdunia
webdunia
webdunia

ಡ್ರ್ಯಾಗನ್‍ನಿಂದ ಚುಚ್ಚಿ ಬರ್ಬರ ಹತ್ಯೆ!

ಡ್ರ್ಯಾಗನ್
ರಾಮನಗರ : ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಗಂಟಪ್ಪ ಕೊಲೆಯಾದ ದುರ್ದೈವಿ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ಬಾನಂದೂರು ಗ್ರಾಮದ ನಿವಾಸಿಯಾಗಿರುವ ಇವರನ್ನು ಭೈರವನದೊಡ್ಡಿ ಸಮೀಪ ಇರುವ ಅವರದ್ದೇ ತೋಟದ ಬೈಕ್ ಸರ್ವಿಸ್ ಸ್ಟೇಷನ್ ಮನೆಯಲ್ಲಿ ಕೊಲೆ ಮಾಡಲಾಗಿದೆ.

ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸದ್ಯ ಕೊಲೆಯಾದ ಗಂಟಪ್ಪ ಅವರ ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗುಪ್ತಾಂಗ ಹಿಗ್ಗಿಸಲು ಹೋಗಿ ಯುವಕನ ಎಡವಟ್ಟು!