ಜಾಗದ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಿಲಾರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಮರಗು ಪಾಂಡ್ರೆ ಹತ್ಯೆಯಾಗಿರುವ ದುರ್ದೈವಿ. ಬೀರು, ಮಾಳಪ್ಪ, ಇನ್ನೋರ್ವ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ, ಜಾಗದ ವಿಷಯಕ್ಕೆ ಹಲವು ದಿನಗಳಿಂದ ಇಬ್ಬರ ಮಧ್ಯೆ ಆಗಾಗ ಜಗಳ ಆಗುತ್ತಿತ್ತು ಎಂದು ತಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.