Publish Date: Wed, 28 Sep 2022 (21:13 IST)
Updated Date: Wed, 28 Sep 2022 (21:16 IST)
ಬಳ್ಳಾರಿ ಜಿಲ್ಲೆಯ ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಅಕ್ಕಿ ವ್ಯಾಪಾರಿಯಾಗಿದ್ದ. ಈತನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಹಂತಕರು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ದೃಶ್ಯ CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.