ಇಟ್ಟಿಗೆಯಿಂದ ತಲೆ ಚಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Webdunia
ಶುಕ್ರವಾರ, 25 ಫೆಬ್ರವರಿ 2022 (17:44 IST)
ಕಾಮಾಕ್ಷಿಪಾಳ್ಯದ ಬಸ್ ನಿಲ್ದಾಣ ಸಮೀಪದ ಫುಟ್‍ಪಾತ್‍ನಲ್ಲಿ ದುಷ್ಕರ್ಮಿಗಳು ತಡರಾತ್ರಿ ವ್ಯಕ್ತಿಯ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
 
ಇಂದು ಮುಂಜಾನೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಕೊಲೆಯಾದ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ನಂತರ ಆ ವ್ಯಕ್ತಿಯ ಜೇಬನ್ನು ಪರಿಶೀಲಿಸಿದಾಗ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆ ಆಧಾರ್‍ಕಾರ್ಡ್‍ನಲ್ಲಿ ಸತೀಶ (46) ವೃಷಭಾವತಿನಗರ ಎಂಬ ವಿಳಾಸ ಇದೆ.
 
ಪೊಲೀಸರು ತಕ್ಷಣ ಆ ವಿಳಾಸಕ್ಕೆ ಹೋಗಿ ವಿಚಾರಿಸಿದಾಗ ಆ ಸ್ಥಳದಲ್ಲಿ ಸತೀಶ್ ವಾಸಿಸುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಸತೀಶ್ ಎಂಬುವವರು ತಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
 
ಜೇಬಿನಲ್ಲಿ ದೊರೆತ ಆಧಾರ್ ಕಾರ್ಡ್ ಕೊಲೆಯಾದ ವ್ಯಕ್ತಿಯದ್ದೇ ಅಥವಾ ಬೇರೆಯವರ ಆಧಾರ್‍ಕಾರ್ಡ್‍ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದರೇ ಎಂಬುದನ್ನುಪೊಲೀಸರು ಪತ್ತೆಹಚ್ಚುತ್ತಿದ್ದಾರೆ. ಸ್ಥಳಕ್ಕೆ ಇನ್ಸ್‍ಪೆಕ್ಟರ್ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವ್ಯಕ್ತಿಯನ್ನು ಯಾರು, ಏತಕ್ಕಾಗಿ ಕೊಲೆ ಮಾಡಿದ್ದಾರೆಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments