Select Your Language

Notifications

webdunia
webdunia
webdunia
webdunia

ಬಜೆಟ್‌ನಲ್ಲಿ ರಾಜ್ಯಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

Union Budget 2025, Prime Minister Narendra Modi, Chief Minister Siddaramaiah

Sampriya

ಮೈಸೂರು , ಶನಿವಾರ, 1 ಫೆಬ್ರವರಿ 2025 (17:05 IST)
ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೂರದೃಷ್ಟಿ ಇಲ್ಲದ ಬಜೆಟ್. ಈ ಮೂಲಕ ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ ಎಂದು ಟೀಕೆ ಮಾಡಿದರು.

ಬಜೆಟ್ ಪೂರ್ವಭಾವಿ ಚರ್ಚೆ ವೇಳೆ ಕರ್ನಾಟಕ ಸರ್ಕಾರ ಹಲವು ಬೇಡಿಕೆಗಳನ್ನು ಮುಂದಿಟ್ಟಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವರ್ಷದ ಬಜೆಟ್ ಗಾತ್ರ 50.65 ಲಕ್ಷ ಕೋಟಿ ಆಗಿದ್ದು, ಇದರಲ್ಲಿ ಸಾಲದ ಮೊತ್ತ 15.68 ಲಕ್ಷ ಕೋಟಿ ಹಾಗೂ ಬಡ್ಡಿ‌ ಪಾವತಿಗೆ 12.70 ಲಕ್ಷ ಕೋಟಿ ನೀಡುತ್ತಿದೆ. ಈ ದೇಶದ ಮೇಲೆ ಸರ್ಕಾರ 202 ಲಕ್ಷ- 205 ಲಕ್ಷ ಕೋಟಿ ಸಾಲ ಹೊರಿಸಿದೆ ಎಂದು ಟೀಕಿಸಿದರು.

ಕರ್ನಾಟಕ ತೆರಿಗೆ ಪಾವತಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಹೆಚ್ಚಿನ ಪಾಲು ನೀಡಲಾಗಿದೆ.  ಇದೊಂದು ರೀತಿ ಬಿಹಾರ ಮತ್ತು ಆಂಧ್ರದ ಬಜೆಟ್ ಇದ್ದಂತಿದೆ. ರಾಜ್ಯದ ಯೋಜನೆಗಳಾದ ಮೇಲೆದಾಟು, ಮಹದಾಯಿ, ಕೃಷ್ಣಾ, ಭದ್ರಾ ಈ ಯಾವ ಯೋಜನೆಗಳಿಗೂ ಅನುದಾನ ನೀಡಿಲ್ಲ ಎಂದು ದೂರಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಂ ಗೌಡ ಎನ್‌ಕೌಂಟರ್ ಬೆನ್ನಲ್ಲೇ ಮತ್ತೋರ್ವ ನಕ್ಸಲ್ ಶರಣಾಗತಿ