Webdunia - Bharat's app for daily news and videos

Install App

ವಾಯುಭಾರ ಕುಸಿತ: ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Sampriya
ಸೋಮವಾರ, 23 ಡಿಸೆಂಬರ್ 2024 (19:42 IST)
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿ ಸೇರಿದಂತೆ  ರಾಜ್ಯದ ಹಲವೆಡೆ ಸೋಮವಾರ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತು. ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಪ್ರದೇಶಗಳಲ್ಲಿ ಡಿ.24ರಿಂದ ಡಿ.28ರವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಡಿ.27 ಮತ್ತು ಡಿ.28ರಂದು ಬಿರುಸಾಗಿ ಮಳೆಯಾಗಲಿದೆ.

ಆದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಡಿ.24ರಿಂದ ಡಿ.26ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿ.27ರಂದು ಜೋರಾಗಿ ವರ್ಷಧಾರೆಯಾಗಲಿದೆ. ಡಿ.24ರಿಂದ ಡಿ.26ರವರೆಗೆ ಉತ್ತರ ಕರ್ನಾಟಕದ ಭಾಗದ ಕೆಲವಡೆ ತುಂತುರು ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments